
Mangalore: ಕರಾವಳಿಯಲ್ಲಿ ಮಳೆ ಬಿರುಸು; ಶಾಲಾ ಕಾಲೇಜಿಗೆ ರಜೆ
24/07/2025
ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಬಿರುಸು ಪಡೆದುಕೊಂಡಿದೆ. ಇನ್ನೂ ಎರಡು ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜು.24ರಂದು ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.