
Mangalore: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ- ಉಪನ್ಯಾಸಕರು ಸೇರಿ ಮೂವರ ಬಂಧನ
15/07/2025 11:18 AM
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಬಗ್ಗೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣ ಸಂಬ0ಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.