Mangalore: ಕೆಪಿಸಿಸಿ ಪ್ರಚಾರ ಸಮಿತಿ ಆಯ್ಕೆ; ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ

Mangalore: ಕೆಪಿಸಿಸಿ ಪ್ರಚಾರ ಸಮಿತಿ ಆಯ್ಕೆ; ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ


ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.


ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಈ ನೇಮಕಾತಿ ಮಾಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇದನ್ನು ಅನುಮೋದಿಸಿದ್ದಾರೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಜವಾಬ್ದಾರಿ ನಿರ್ವಹಣೆಯಲ್ಲಿ ತೊಡಗಲು ಡೆನಿಸ್ ಅವರಿಗೆ ಸೂಚಿಸಲಾಗಿದೆ. ಜಿಲ್ಲಾಮಟ್ಟ, ಕ್ಷೇತ್ರವಾರು, ಬ್ಲಾಕ್ ಮಟ್ಟ, ಪಂಚಾಯತ್ ಮಟ್ಟದಲ್ಲಿ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಿಸುವ ಕಾರ್ಯ ಆರಂಭಿಸುವಂತೆ ಅವರಿಗೆ ತಿಳಿಸಲಾಗಿದೆ.

 

ಬೂತ್ ಅಧ್ಯಕ್ಷರಾಗಿ, ವಾರ್ಡ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಪ್ರಚಾರ ಸಮಿತಿ  ರಾಜ್ಯ ಸಂಯೋಜಕರಾಗಿ ಹೀಗೆ ವಿವಿಧ ಹಂತಗಳಲ್ಲಿ ಅವರು ಪಕ್ಷ ಸೇವೆ ಸಲ್ಲಿಸಿದ್ದಾರೆ.


Ads on article

Advertise in articles 1

advertising articles 2

Advertise under the article