
Mangalore: ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಡಾ. ಮುರಲೀ ಮೋಹನ್ ಚೂಂತಾರು ಆಯ್ಕೆ
31/07/2025
ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028 ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ. ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ.
ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಮಾಂಡೆ0ಟ್ ಆಗಿ ಹಾಗೂ ಪೌರ ರಕ್ಷಣಾ ವಿಭಾಗದ ಮುಖ್ಯಪಾಲಕರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ.