
Mangalore: ಹಲವು ಪ್ರಕರಣಗಳ ಆರೋಪಿ ಅರೆಸ್ಟ್; ನ್ಯಾಯಾಂಗ ಬಂಧನ
16/07/2025 11:06 AM
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಸುರತ್ಕಲ್ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.ಬಂಧಿತ ಆರೋಪಿಯನ್ನು ಉಡುಪಿ ಮಂಚಿ ನಿವಾಸಿ ರಾಜೇಶ್ ನಾಯ್ಕ್ (48) ಎಂದು ಗುರುತಿಸಲಾಗಿದೆ. ಮಂಗಳೂರು ನಗರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ, ಕಳವು, ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಈತನನ್ನು ಜುಲೈ 14 ರಂದು ಧಾರವಾಡ ಜಿಲ್ಲೆಯ ವಿದ್ಯಾಗಿರಿ ಎಂಬಲ್ಲಿ0ದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ,