
Mangalore: ಇಲಿ ಪಾಷಾಣ ಸೇವಿಸಿದ ಪೊಲೀಸ್ ಸಿಬ್ಬಂದಿ; ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಸಾವು
30/07/2025
ಇಲಿ ಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಹೆಡ್ ಕಾನ್ಸ್ಟೇಬಲ್‌ವೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಉತ್ತರ ಸಂಚಾರ ಠಾಣಾ ಹೆಡ್ ಕಾನ್ಸ್ಟೇಬಲ್ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ (44) ಮೃತಪಟ್ಟವರು.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಂಜುನಾಥ್ ಅವರು ಆಯುರ್ವೇದ ಔಷಧಿ ಸೇವಿಸುತ್ತಿದ್ದರು. ಇಲಿ ಪಾಷಾಣವನ್ನು ಔಷಧಿಯೆಂದು ತಪ್ಪಾಗಿ ಗ್ರಹಿಸಿ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂಧಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹರೇಕಳ ಮೂಲದವರಾದ ಮಂಜುನಾಥ್ ಹೆಗ್ಡೆ ಅವರು ಸುರತ್ಕಲ್ ಚೇಲೈರು ಬಳಿ ಪತ್ನಿ, ಇಬ್ಬರು ಮಕ್ಕಳೊಂದಿಗೆ ವಾಸವಿದ್ದರು.