
Manipal: ಅಪಾರ್ಟ್ಮೆಂಟ್‌ನಲ್ಲಿ ವೇಶ್ಯಾವಾಟಿಕೆ: ಓರ್ವ ಆರೋಪಿಯ ಬಂಧನ
17/07/2025 09:32 AM
ಈಶ್ವರನಗರದ ಅಪಾರ್ಟ್ಮೆಂಟ್‌ವೊ0ದರ ರೂಮಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ತಿಳಿದು ದಾಳಿ ನಡೆಸಿದ ಮಣಿಪಾಲ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊನ್ನಾವರದ ಗಣೇಶ್ ಗಣಪ ನಾಯ್ಕ್ ಎಂದು ಗುರುತಿಸಲಾಗಿದೆ. . ಲಾಡ್ಜ್ನಲ್ಲಿದ್ದ ಮಹಿಳೆಯನ್ನು ರಕ್ಷಿಸಲಾಗಿದೆ. ಹೆರ್ಗ ಗ್ರಾಮದ ಈಶ್ವರನಗರ 20 ನೇ ಕ್ರಾಸ್ ನ ಬಳಿ ಇರುವ ಮಾಲಸಾ ಎಮರಾಲ್ಡ್ ಅಪಾರ್ಟ್ಮೆಂಟ್ ನ ಮೊದಲನೇ ಮಹಡಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ತಿಳಿದ ಮಣಿಪಾಲ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿ ಗಣೇಶ್ ನಾಯ್ಕ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.