
Manipal: ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆಗೆ ಯತ್ನ; ಆರೋಪಿಗೆ ನ್ಯಾಯಾಂಗ ಬಂಧನ
27/07/2025
ಮಹಿಳಾ ಪೊಲೀಸ್ ಸಿಬ್ಬಂದಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೊಡವೂರು ಜುಮಾದಿನಗರ ನಿವಾಸಿ ಸಾಗರ್ (25) ಎಂದು ಗುರುತಿಸಲಾಗಿದೆ. ಜುಲೈ 26ರ ಶನಿವಾರ ಬೆಳಿಗ್ಗೆ ಸುಮಾರು 2.30ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದಾಗ ಅಧಿಕಾರಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.