Mumbai: ಸಾಲ ವಂಚನೆ ಪ್ರಕರಣ; ಅನಿಲ್ ಅಂಬಾನಿ ಕಂಪನಿ ಮೇಲೆ ಇಡಿ ದಾಳಿ

Mumbai: ಸಾಲ ವಂಚನೆ ಪ್ರಕರಣ; ಅನಿಲ್ ಅಂಬಾನಿ ಕಂಪನಿ ಮೇಲೆ ಇಡಿ ದಾಳಿ


ಉದ್ಯಮಿ ಅನಿಲ್ ಅಂಬಾನಿಗೆ ಸೇರಿದ ಹಲವಾರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 


ಯೆಸ್ ಬ್ಯಾಂಕ್‌ಗೆ 3,000 ಕೋಟಿ ರೂಪಾಯಿ ಸಾಲ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬ0ಧಿಸಿದ0ತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಗ್ರೂಪ್‌ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ. 

2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್ ಬ್ಯಾಂಕ್ 3,000 ಕೋಟಿ ರೂ. ಸಾಲ ನೀಡಿತ್ತು. ಆದ್ರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಪತ್ತೆಹಚ್ಚಿದೆ. ಪ್ರಾಥಮಿಕ ತನಿಖೆಯಲ್ಲಿ ಇದಕ್ಕೆ ಸಾಕ್ಷ್ಯಾಧಾರಗಳೂ ಸಿಕ್ಕಿವೆ ಅಂತ ಇಡಿ ಹೇಳಿದೆ.


Ads on article

Advertise in articles 1

advertising articles 2

Advertise under the article