
Mumbai: ರೈಲು ಸ್ಫೋಟ ಪ್ರಕರಣದ ಆರೋಪಿಗಳ ಖುಲಾಸೆ; ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ
24/07/2025
2006 ರ ಜುಲೈ 11 ರಂದು ನಡೆದ ಮುಂಬೈ ರೈಲು ಸ್ಫೋಟ ಪ್ರಕರಣದ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. (Photo Credit PTI)
ಲೋಕಲ್ ರೈಲಿನಲ್ಲಿ ನಡೆದಿದ್ದ ಬಾಂಬ್ ಸ್ಫೋಟಗಳಿಗೆ ಸಂಬ0ಧಿಸಿದ0ತೆ MCOCA (ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ವಿಶೇಷ ನ್ಯಾಯಾಲಯವು ಆರೋಪಿಗಳಲ್ಲಿ ಐವರಿಗೆ ಮರಣದಂಡನೆ ಹಾಗೂ ಇತರ ಏಳು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಶಿಕ್ಷೆಯನ್ನು ಬಾಂಬ್ ಹೈಕೋರ್ಟ್ ರದ್ದುಗೊಳಿಸಿತ್ತು.
ಮಹಾರಾಷ್ಟ್ರ ಸರ್ಕಾರವು ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಬಾಂಬೆ ಹೈಕೋರ್ಟ್ ತೀರ್ಪಿಗ ತಾತ್ಕಾಲಿಕ ತಡೆ ನೀಡಿದೆ. ಆದರೆ, ಹೈಕೋರ್ಟ್ ತೀರ್ಪಿನ ನಂತರ ಬಿಡುಗಡೆಗೊಂಡಿರುವ 12 ಆರೋಪಿಗಳನ್ನು ಪುನಃ ಜೈಲಿಗೆ ಕಳುಹಿಸುವ ಅಗತ್ಯವಿಲ್ಲ ಎಂಬುದಾಗಿ ಪೀಠ ಸ್ಪಷ್ಟಪಡಿಸಿದೆ.