Mysore: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ;ಇಬ್ಬರು ಸಿಬ್ಬಂದಿಗೆ ಗಾಯ

Mysore: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ;ಇಬ್ಬರು ಸಿಬ್ಬಂದಿಗೆ ಗಾಯ


ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಹೋಗುವ ವೇಳೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್‌ವೇ ಯಲ್ಲಿ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ  ವಾಪಸ್ ಬೆಂಗಳೂರಿಗೆ ಬರುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್‌ವೇಯಲ್ಲಿ ಘಟನೆ ನಡೆದಿದೆ. ಬೆಂಗಾವಲು ವಾಹನ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಬೆಂಗಾವಲು ವಾಹನದಲ್ಲಿದ್ದ ಇಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.


Ads on article

Advertise in articles 1

advertising articles 2

Advertise under the article