
New Delhi: ಸರ್ಕಾರಿ ಶಾಲಾ ಕಟ್ಟಡ ಕುಸಿತ: ನಾಲ್ವರು ವಿದ್ಯಾರ್ಥಿಗಳು ಸಾವು; ಹಲವರು ಗಂಭೀರ
25/07/2025
ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಭೀಕರ ಘಟನೆ ನಡೆದಿದೆ. ಶಾಲಾ ಕಟ್ಟಡವೊಂದು ಕುಸಿದು ನಾಲ್ವರು ಮಕ್ಕಳು ಮೃತಪಟ್ಟು ಹಲವು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.
ಪಿಪ್ಲೋಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಘಟನೆ ವೇಳೆ ಶಾಲೆಯೊಳಗೆ 40 ಕ್ಕೂ ಹೆಚ್ಚು ಮಕ್ಕಳು ಇದ್ದರು. ಅವರಲ್ಲಿ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮತ್ತು ಅಧಿಕಾರಿಗಳು ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿವೆ.