
NewDelhi: ಮುಡಾ ಪ್ರಕರಣ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಬಿಗ್ ರಿಲೀಫ್
21/07/2025 07:33 AM
ಮುಡಾ ಪ್ರಕರಣಕ್ಕೆ ಸಂಬ0ಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸುಪ್ರೀಂ ರ್ಕೋನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸಿಎಂ ಪತ್ನಿ ವಿರುದ್ಧದ ಮೂಡಾ ಪ್ರಕರಣದ ವಿಚಾರಣೆ ರದ್ದಾಗಿದೆ. ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇಡಿಯನ್ನು ಟೀಕಿಸಿದೆ. ಅಲ್ಲದೇ ಇ.ಡಿ ಕಾರ್ಯವೈಖರಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.