
Nitte: ದ್ವೇಷ ಬಿತ್ತುವ ಪ್ರಚೋದನಾಕಾರಿ ಬರಹ:ವಿದ್ಯಾರ್ಥಿನಿ ಬಂಧನ
15/07/2025 11:14 AM
ನಿಟ್ಟೆ ಇಂಜಿನಿಯರಿ0ಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬ0ಧಿಸಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. ಮೇ 7ರಂದು ಸಂಜೆ 7 ಗಂಟೆಗೆ ಹಾಸ್ಟೆಲ್ ಮೊದಲ ಮಹಡಿಯ ಶೌಚಾಲಯದಲ್ಲಿ ಗೋಡೆಯ ಮೇಲೆ ಅಶ್ಲೀಲ ಪದಗಳನ್ನು ಬಳಸಿ ಪ್ರಚೋದನಕಾರಿಯಾಗಿ ಬರಹ ಬರೆಯಲಾಗಿತ್ತು. ಹಾಸ್ಟೆಲ್ ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿದ್ದಾರೆಂದು ನಂಬಲಾಗಿತ್ತು. ಈ ಬಗ್ಗೆ ನಿಟ್ಟೆ ಕಾಲೇಜಿನ ಮಹಿಳಾ ಹಾಸ್ಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿತ್ತು. ಭಾರತ್- ಪಾಕ್ ಸಂಘರ್ಷದ ಸಂದರ್ಭದಲ್ಲಿ ಬರೆಯಲಾಗಿದ್ದ ಪ್ರಚೋದನಕಾರಿ ಬರಹದ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದರು. ಆದರೆ ಸರಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ. ಇದೀಗ ಕೈಬರಹದ ಹೋಲಿಕೆ ಆಧರಿಸಿ ಪೊಲೀಸರು ಆರೋಪಿ ವಿದ್ಯಾರ್ಥಿನಿಯನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ಫಾತಿಮಾ ಶಬ್ನಾ (21) ಎಂಬಾಕೆಯನ್ನು ಬಂಧಿಸಿದ್ದು, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.