Perdoor: ಅನಂತಪದ್ಮನಾಭನ ಸನ್ನಿಧಿಯಲ್ಲಿ ನಗಾರಿ ಗೋಪುರಕ್ಕೆ ಶಿಲಾನ್ಯಾಸ
13/07/2025 12:35 PM
ಪೆರ್ಡೂರು ಮಹತೋಭಾರ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಿರ್ಮಾಣವಾಗಲಿರುವ ಭವ್ಯ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭವು ಜುಲೈ 13ರಂದು ನಡೆಯಿತು. ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಅಭಯ ಚಂದ್ರ ಜೈನ್, ವಿದ್ವಾನ್ ಕೆ.ಪಿ ಕುಮಾರ್ ಗುರು ತಂತ್ರಿ,ಪ್ರಮೋದ್ ರೈ ಪಳಂಜೆ ಉಪಸ್ಥಿತರಿದ್ದರು.