.jpg)
Puttur: ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ನಿಷಿದ್ಧ; ಶಾಸಕ ರೈ ಸ್ಪಷ್ಟನೆ
22/07/2025 04:59 AM
ದಕ್ಷಿಣಕನ್ನಡ ಜಿಲ್ಲೆಯ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವಿತರಣೆ ವ್ಯವಸ್ಥೆಯನ್ನು ನಿಲ್ಲಿಸಲು ಚಿಂತಿಸಲಾಗಿದೆ, ಈ ಬಗ್ಗೆ ಪುತ್ತೂರು ಶಾಸಕ ಅಶೋಕ ರೈ ಹೇಳಿದ್ದಾರೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಿರ್ವಹಣೆಗೆ ಹಣದ ಕೊರತೆ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ ಅನ್ನಪ್ರಸಾದ ಸೇವೆಯನ್ನು ನಿಲ್ಲಿಸಲು ಸೂಚಿಸಲಾಗಿದೆ. ಅನ್ನಪ್ರಸಾದ ಬೇಕಾದಲ್ಲಿ ಹಣ ಪಾವತಿಸುವಂತೆ ಸೂಚನೆ ನೀಡಲಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಒಂದು ಊಟಕ್ಕೆ 50 ರೂಪಾಯಿ ದರ ನಿಗದಿಪಡಿಸಲಾಗಿದೆ. ಈ ಹಿಂದೆ ಎಲ್ಲಾ ಧಾರ್ಮಿಕ ಸಭೆ-ಸಮಾರಂಭಗಳಿಗೆ ಕ್ಷೇತ್ರದಿಂದ ಉಚಿತವಾಗಿ ಅನ್ನಪ್ರಸಾದ ನೀಡಲಾಗುತ್ತಿತ್ತು. ಆಡಳಿತ ಮಂಡಳಿಗೆ ಮನವಿ ನೀಡಿ ಈ ವ್ಯವಸ್ಥೆಯನ್ನು ಪಡೆಯಬಹುದಾಗಿತ್ತು. ಆದರೆ ಇನ್ನು ಮುಂದೆ ಉಚಿತ ಅನ್ನಪ್ರಸಾದಕ್ಕೆ ಕ್ಷೇತ್ರದಲ್ಲಿ ಅವಕಾಶ ಇಲ್ಲ. ಹಣಕಾಸಿನ ಕೊರತೆಯಿಂದಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ವ್ಯವಸ್ಥೆ ಬಂದ್ ಆಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ದೇವಸ್ಥಾನಕ್ಕೆ ಬರುವ ಹಣ ದೇವಸ್ಥಾನದ ಖರ್ಚಿಗೆ ಖಾಲಿಯಾಗುತ್ತದೆ. ದೇವಸ್ಥಾನದಲ್ಲಿ ಯಾವುದೇ ಹಣ ಡೆಪಾಸಿಟ್ ಇಲ್ಲ. ದೇವಸ್ಥಾನದ ಆದಾಯವನ್ನು ಹೆಚ್ಚು ಮಾಡಲು ಚಿಂತನೆ ಮಾಡಲಾಗಿದ್ದು, ದೇವಸ್ಥಾನ ಸುತ್ತಮುತ್ತಲಿನ ಜಾಗವನ್ನು ವಾಣಿಜ್ಯ ಸೇವೆಗಳಿಗೆ ಬಳಸಲು ಚಿಂತನೆ ಮಾಡಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.