
Puttur: ಮದುವೆಯಾಗುವುದಾಗಿ ಯುವತಿಗೆ ವಂಚನೆ; ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ
26/07/2025
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಶ್ರೀಕೃಷ್ಣ ಜೆ. ರಾವ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜುಲೈ 26ರಂದು ಅರ್ಜಿಯ ವಿಚಾರಣೆ ನಡೆಯಿತು. ವಾದ- ವಿವಾದವನ್ನು ಆಲಿಸಿದ ನ್ಯಾಯಾಲಯ ಆರೋಪಿ ಕೃಷ್ಣ ಜೆ. ರಾವ್ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದೆ.
ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ಮದುವೆಗೆ ನಿರಾಕರಿಸಿದ್ದ. ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಜಾಮೀನು ನೀಡುವಂತೆ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾಯಾಲಯಕ್ಕೆ ತಿರಸ್ಕರಿಸಿದೆ.