Puttur: ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳ ಬಂಧನ

Puttur: ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳ ಬಂಧನ


ಪುತ್ತೂರು ತಾಲೂಕಿನ ಬೆಳ್ಳಾರೆ ಸಮೀಪ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
 

ಕಾಸರಗೋಡಿನ ದೇಲಂಪಾಡಿಯ ಮುಜಾಮಿನ್ ಹಾಗೂ ಅಬ್ದುಲ್ಲ ಬಂಧಿತ ಆರೋಪಿಗಳು. ಬಂಧಿತರು ಹಾಸನ ಕಡೆಯಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಈಶ್ವರ ಮಂಗಲಕ್ಕೆ 5 ಎಮ್ಮೆಗಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಪಡೆದ ಬೆಳ್ಳಾರೆ ಠಾಣಾ ಎಸ್‌ಐ ಸಂತೋಷ್ ನೇತೃತ್ವದಲ್ಲಿ ಪೊಲೀಸರು ವಾಹನ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ. 5 ಎಮ್ಮೆಗಳನ್ನು ರಕ್ಷಿಸಲಾಗಿದೆ. 

ಬಂಧಿತರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 


Ads on article

Advertise in articles 1

advertising articles 2

Advertise under the article