Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ; ನ್ಯಾಯಾಲಯಕ್ಕೆ ಹಾಜರು
26/07/2025
ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರಿನ ಔರಾನ್ ಯಾನೆ ರಿಯಾಜ್(33) ಬಂಧಿತ ಆರೋಪಿ. ಈತನ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ವಿವಿಧ ಪ್ರಕರಣಗಳಿವೆ. ಐಪಿಸಿ ಕಲಂ 379 ಮತ್ತು 420 ಅನ್ವಯ ಕಳ್ಳತನ ಮತ್ತು ವಂಚನೆ ಪ್ರಕರಣಗಳು ದಾಖಲಾಗಿವೆ. ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.