
Sagara: ಕೆಎಸ್ಆರ್ಟಿಸಿ ಬಸ್- ಟ್ರಕ್ ಅಪಘಾತ; ಇಬ್ಬರು ಗಂಭೀರ
24/07/2025
ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಆನಂದಪುರದಿ0ದ ಸಾಗರದ ಕಡೆ ತೆರಳುತ್ತಿದ್ದ ಟ್ರಕ್ ಮುಖಾಮುಖಿ ಢಿಕ್ಕಿಯಾಗಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆಯಿಂದಾಗಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸಿದರು.