
Shirva: ಎಂ.ಎಸ್.ಆರ್.ಎಸ್ ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ
30/07/2025
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಪ್ರಥಮ ಪದವಿ ತರಗತಿಯ ವಿಧ್ಯಾರ್ಥಿಗಳಿಗಾಗಿ ಓರಿಯಂಟೇಷನ್ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಬೆಂಗಳೂರಿನ ಟಿ.ಸಿ.ಎಸ್. ಕಂಪೆನಿಯ ಸೀನಿಯರ್ ಮ್ಯಾನೇಜರ್ ಪುಷ್ಪರಾಜ್ ಚೌಟ, ವಿದ್ಯಾರ್ಥಿ ಜೀವನದ ಮಹತ್ವವನ್ನು ತಿಳಿಸುತ್ತಾ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯ ಎಂಬುದನ್ನು ಮನದಟ್ಟು ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಿಥುನ್ ಚಕ್ರವರ್ತಿ, 2025-26 ರ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳು ಹಾಗೂ ಕಾಲೇಜಿನ ರೀತಿ ನಿಯಮಗಳನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಹೇಮಲತಾ ಶೆಟ್ಟಿ ಸ್ವಾಗತಿಸಿದರು. ಐ. ಕ್ಯೂ. ಎ. ಸಿ ಸಂಯೋಜಕಿ ಡಾ. ಸೋನಾ ಎಚ್.ಸಿ ವಂದಿಸಿದರು. ಕನ್ನಡ ಉಪನ್ಯಾಸಕಿ ವರಮಹಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.