Sullia: ಲಾರಿ, ಕಾರಿನ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
25/07/2025
ಮಾಣಿ- ಮೈಸೂರು ರಾ್ಷ್ಟ್ರೀಯ ಹೆದ್ದಾರಿಯ ಕೊಯನಾಡು- ದೇವರಕೊಲ್ಲಿ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ಕು ಜನ ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯ ಗೋಣಿ ಕೊಪ್ಪ ಮೂಲದ ಕುಟುಂಬ ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿದೆ. ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಮೃತ ದುರ್ದೈವಿಗಳು. ಮೃತರು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳು ಎಂದು ತಿಳಿದುಬಂದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಕಾರು ಮಂಗಳೂರಿನಿ0ದ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿದ್ದ ನಾಲ್ಕು ಮಂದಿ ಉಳ್ಳಾಲಕ್ಕೆ ಹೋಗಿ ಹಿಂತಿರುಗುವಾಗ ಎದುರಿಗೆ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದೆ.