
Sullia: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡ ಮಹಿಳೆ ಸಾವು
28/07/2025
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯದ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ನಡೆದಿದೆ.
ಮೃತರನ್ನು ಸಂಪಾಜೆ ಬೈಲು ನಿವಾಸಿ, ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಮಾರ್ ಚೆದ್ಕಾರ್ ಅವರ ತಾಯಿ ಕಮಲ ಚೆದ್ಕಾರ್ (67) ಎಂದು ಗುರುತಿಸಲಾಗಿದೆ. ಕಮಲ ಅವರು ಕಲ್ಲುಗುಂಡಿಯ ಅಂಚೆ ಕಚೇರಿಯ ಬಳಿ ಬಸ್ ತಂಗುದಾಣದಿAದ ಸಂಪಾಜೆ ಕಡೆ ಹೋಗುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸುಳ್ಯಕ್ಕೆ ಬರುತ್ತಿದ್ದ ಕೇರಳ ಮೂಲದ ಬೈಕ್ ನಿಯಂತ್ರಣ ತಪ್ಪಿ ಕಮಲ ಅವರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಕಮಲ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.