
Surathkal: ಎಂಆರ್‌ಪಿಎಲ್ ಸಿಬ್ಬಂದಿಗಳಿಗೆ ಉತ್ತರಪ್ರದೇಶದಲ್ಲಿ ದಿಗ್ಬಂಧನ
14/07/2025 05:53 AM
ಎಂಆರ್‌ಪಿಎಲ್ ನಲ್ಲಿ ಎಚ್ 2ಎಸ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿವಾಸಿ ದೀಪ್ ಚಂದ್ ಅವರ ಮೃತದೇಹವನ್ನು ನಿವಾಸಕ್ಕೆ ತಲುಪಿಸಲು ಹೋಗಿದ್ದ ಎಂಆರ್‌ಪಿಎಲ್ ನ 6 ಮಂದಿ ಸಿಬ್ಬಂದಿಯನ್ನು ಗ್ರಾಮಸ್ಥರು ದಿಗ್ಬಂಧನದಲ್ಲಿರಿಸಿದ ಘಟನೆ ನಡೆದಿದೆ. ಎಂಆರ್‌ಪಿಎಲ್ ಉದ್ಯೋಗಿಗಳಾದ ಪ್ರಸಾದ್, ಬಿಲ್ದಾರ್, ಸುರೇಂದರ್, ಬಾಳನಾರಾಯಣ, ಪಂಕಜ್ ಮತ್ತು ಇನ್ನೋರ್ವನನ್ನು ಗ್ರಾಮಸ್ಥರು ದಿಗ್ಬಂಧನದಲ್ಲಿರಿಸಿದ್ದರು ತಿಳಿದು ಬಂದಿದೆ.ದೀಪ್ ಚಂದ್ ಶನಿವಾರ ಎಂಆರ್‌ಪಿಎಲ್ ನಲ್ಲಿ ನಡೆದಿದ್ದ ವಿಷಾನಿಲ ಸೋರಿಕೆಯಿಂದ ಮೃತಪಟ್ಟಿದ್ದರು. ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರವಿವಾರ ಬೆಳಗ್ಗೆ ಮೃತದೇಹವನ್ನು ಉತ್ತರ ಪ್ರದೇಶಕ್ಕೆ ರವಾನಿಸಲಾಗಿತ್ತು.