
Tumakur: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ; ರಸ್ತೆ ಮಧ್ಯೆ ಸುಟ್ಟು ಕರಕಲಾದ ಕಾರು
30/07/2025
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಯಲ್ಲಾಪುರ ಗೇಟ್ ಬಳಿ ನಡೆದಿದೆ.
ತುಮಕೂರಿನಿಂದ ಹೊಸದುರ್ಗದ ಕಡೆ ಸಾಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಚಾಲಕ ಇಳಿದಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ.
ಹೇಮಂತ್ ಎಂಬವರಿಗೆ ಸೇರಿದ ಡಸ್ಟರ್ ಕಾರು ಇದಾಗಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.