
Udupi: ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ; ಕಾಂಗ್ರೆಸ್‌ನಿ0ದ ಸತ್ಯದರ್ಶನ
21/07/2025 10:23 AM
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯು ಸುಳ್ಳು ಆರೋಪ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ನ ಉಡುಪಿ ವಿಧಾನಸಭಾ ಕ್ಷೇತ್ರ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಉಡುಪಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
9/11, ಅಕ್ರಮ ಸಕ್ರಮ ಮಂಜೂರು, ಮಾಸಾಶನ ರದ್ದತಿ, ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬ0ಧಿಸಿ ಬಿಜೆಪಿಯು ಪ್ರತಿಭಟನೆ ಮೂಲಕ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಜನರಿಗೆ ಕಾಂಗ್ರೆಸ್ ಆಡಳಿತದ ಸತ್ಯದರ್ಶನ ಮಾಡುವ ಉದ್ದೇಶದಿಂದ ಉಡುಪಿಯ 155 ಗ್ರಾ.ಪಂ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಇದರ ಮುಂದುವರಿದ ಭಾಗವಾಗಿ ಜುಲೈ21ರಂದು ತಾಲೂಕು ಕಚೇರಿ ಎದುರು ಧರಣಿ ನಡೆಸಿ, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಸಂಸದ ಜಯ ಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಪ್ರಮುಖರಾದ ಅಲೆವೂರು ಹರೀಶ್ ಕಿಣಿ, ರಮೇಶ್ ಕಾಂಚನ್ ಮೊದಲಾದವರು ಪಾಲ್ಗೊಂಡಿದ್ದರು.
ವಿವರಗಳಿಗೆ ಕ್ಲಿಕ್ ಮಾಡಿ: