Udupi: 2012ರ ಪ್ರಕರಣ; 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
25/07/2025
ಅಕ್ರಮ ಮದ್ಯ ಮತ್ತು ಲಾಟರಿ ನಿಷೇಧಕ್ಕೆ ಸಂಬ0ಧಿಸಿದ0ತೆ ಕರ್ನಾಟಕ ಅಬಕಾರಿ ಕಾಯ್ದೆಯಡಿ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬ0ಧಿಸಿದ0ತೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬ0ಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಸತ್ಯ ಅಲಿಯಾಸ್ ಸತೀಶ್ (42) ಬಂಧಿತ ಆರೋಪಿ. ಜುಲೈ 23ರಂದು ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಸತೀಶ್‌ನನ್ನು ಪತ್ತೆಹಚ್ಚಿ ಬಂಧಿಸಿದರು. ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 32 ಮತ್ತು 34 ರ ಅಡಿಯಲ್ಲಿ ಅಪರಾಧ ಸಂಖ್ಯೆ 40/2012 ಮತ್ತು ಅಪರಾಧ ಸಂಖ್ಯೆ 87/2012 ಕ್ಕೆ ಸಂಬ0ಧಿಸಿದ0ತೆ ಅಬಕಾರಿ ಮತ್ತು ಲಾಟರಿ ನಿಷೇಧ ಘಟಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.