ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವುದರಿಂದ ಮುಂಜಾಗರೂಕತಾ ಕ್ರಮವಾಗಿ ಜುಲೈ 24ರಂದು ಅಂಗನವಾಡಿ, ಶಾಲೆಗಳು, ಪ.ಪೂರ್ವ ಕಾಲೇಜುಗಳು ಹಾಗೂ ಐಟಿಐಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ರಜೆ ಘೋಷಿಸಿದ್ದಾರೆ.
ಡಿಪ್ಲೊಮಾ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇರುವುದಿಲ್ಲ.