Udupi:  ಕರಾವಳಿಯಲ್ಲಿ ಜು. 27ರವರೆಗೆ ಭಾರೀ ಗಾಳಿ ಮಳೆ; ಹವಾಮಾನ ಇಲಾಖೆಯ ಸೂಚನೆ

Udupi: ಕರಾವಳಿಯಲ್ಲಿ ಜು. 27ರವರೆಗೆ ಭಾರೀ ಗಾಳಿ ಮಳೆ; ಹವಾಮಾನ ಇಲಾಖೆಯ ಸೂಚನೆ


ಕರಾವಳಿಯಲ್ಲಿ ಜು. 27ರ ವರೆಗೆ ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. 

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. 


ಈ ಅವಧಿಯಲ್ಲಿ ಸಮುದ್ರದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಸಮುದ್ರ, ನದಿ ತೀರದ ಮತ್ತು ತಗ್ಗುಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಸೋಮವಾರ ಆರೆಂಜ್ ಅಲರ್ಟ್ ಇದ್ದು, ಹಗಲು ಆಗಾಗ ತುಂತುರು ಮಳೆಯಾಗಿದೆ. ಉಳಿದಂತೆ ಮೋಡ, ತುಸು ಬಿಸಿಲು ಕಂಡುಬ0ದಿದೆ. ಜು.22 ರಂದು ಕರಾವಳಿಯಲ್ಲಿ  ಭಾರತೀಯ ಹವಾಮಾನ ಇಲಾಖೆ  ಆರೆಂಜ್  ಅಲರ್ಟ್  ನೀಡಿದೆ. ಕೆಲವು ದಿನಗಳಿಂದ ಬಿಡದೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆಯಾಗಿದೆ. ಇದರಿಂದ ಒಂದು ಮನೆ ಸಂಪೂರ್ಣ ನಾಶವಾಗಿದ್ದು ಮತ್ತು 5 ಮನೆಗಳಿಗೆ ಸಾಕಷ್ಟು ಹಾನಿಯಾಗಿದೆ.  






Ads on article

Advertise in articles 1

advertising articles 2

Advertise under the article