
Udupi: ಕಡಲು ಕೊರತೆ ಸಮಸ್ಯೆಗೆ 300 ಕೋಟಿ ರೂಪಾಯಿ ಯೋಜನೆ; ಸಚಿವ ಕೃಷ್ಣ ಭೈರೇಗೌಡ ಹೇಳಿಕೆ
30/07/2025
ರಾಜ್ಯದ ಕರಾವಳಿ ಭಾಗದ ಪ್ರಮುಖ ಸಮಸ್ಯೆಯಾಗಿರುವ ಕಡಲು ಕೊರೆತದ ಬಗ್ಗೆ ಅಧ್ಯಯನ ನಡೆಸಿ 300 ಕೋಟಿ ರೂಪಾಯಿಗಳ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ ಸಚಿವರು, ಕಾಪು ತಾಲೂಕು ಮೂಳೂರು ಗ್ರಾಮದ ತೊಟ್ಟಂನಲ್ಲಿ ಕಡಲ್ಕೊರೆತದಿಂದ ಹಾನಿಗೊಂಡ ಪ್ರದೇಶಗಳನ್ನು ವೀಕ್ಷಿಸಿದರು. ಕಡಲು ಕೊರತೆ ಸಮಸ್ಯೆ ಕುರಿತಂತೆ ಮುಖ್ಯ ಮಂತ್ರಿಗಳ ಸೂಚನೆಯಂತೆ ತಜ್ಞರ ತಂಡದಿ0ದ ವೈಜ್ಞಾನಿಕ ಅಧ್ಯಯನ ನಡೆಸಿ 300 ಕೋಟಿ ರೂಪಾಯಿಗಳ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.