
Udupi: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 5 ದಿನ ಭಾರೀ ಮಳೆ;ಹವಾಮಾನ ಇಲಾಖೆ ಮುನ್ಸೂಚನೆ
20/07/2025 11:13 AM
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 20ರಿಂದ 5 ದಿನ ಭಾರೀ ಮಳೆಯಾಗುವ ಸಂಭವವಿದೆ. ಈ ಅವಧಿಯಲ್ಲಿ ಗಾಳೀ ಕೂಡಾ ಜೋರಾಗಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 20ರಿಂದ ಜುಲೈ 24ರವರೆಗೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಲಿದೆ. ಜುಲೈ20 ಮತ್ತು 21ರಂದು ಕರಾವಳಿ ಜಿಲ್ಲೆಗಳ ನದಿ ಪಾತ್ರಗಳಲ್ಲಿ ಪ್ರವಾಹ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.