
Udupi: ಶರಣ್ ಪಂಪ್‌ವೆಲ್ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಆದೇಶ
10/07/2025 06:54 AM
ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬ0ಧಿಸಿದ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಬಂಧನ ಸೇರಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ಉಡುಪಿ ಪೊಲೀಸರಿಗೆ ಸೂಚನೆ ನೀಡಿ ಹೈಕೋರ್ಟ್ ಆದೇಶಿಸಿದೆ. ಎಫ್‌ಐಆರ್ ರದ್ದು ಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಪೀಠ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಪೊಲೀಸ್ ಇಲಾಖೆಗೆ ಸೂಚಿಸಿ, ಪೊಲೀಸರ ವಿಚಾರಣೆಗೆ ಸಹಕರಿಸಲು ಶರಣ್ ಪಂಪ್ ವೆಲ್ ಗೆ ಹೈಕೋರ್ಟ್ ತಾಕೀತು ಮಾಡಿದೆ.