Udupi: ಹೆದ್ದಾರಿ ದುರಸ್ಥಿಗೆ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ಮನವಿ

Udupi: ಹೆದ್ದಾರಿ ದುರಸ್ಥಿಗೆ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ಮನವಿ


ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿರುವ ಉಡುಪಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ತನಕದ ರಾಷ್ಟ್ರೀಯ ಹೆದ್ದಾರಿ ಹಾಗೂ ಉಡುಪಿ ನಗರ ಭಾಗದ ರಸ್ತೆಗಳನ್ನು  ಕೂಡಲೇ ದುರಸ್ತಿಗೊಳಿಸಿ ವಾಹನ ಸಂಚಾರ ಸುಗಮಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಉಡುಪಿಯ ಹಲವಾರು ಪ್ರಮುಖ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಕೂಡ ವಿನಂತಿಸಲಾಯಿತು.

 ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗಣೇಶ್ ನೆರ್ಗಿ, ಚಂದ್ರಮೋಹನ್, ಸತೀಶ್ ಕೊಡವೂರು, ಸತೀಶ್ ಕುಮಾರ್ ಮಂಚಿ, ಕೃಷ್ಣ ಹೆಬ್ಬಾರ್,ನಂದ ಕಿಶೋರ್,ಭರತ್ ಕುಮಾರ್, ಗಿರೀಶ್ ಪೂಜಾರಿ, ಚಿತ್ತರಂಜನ್ ಹೆರ್ಗ, ಜೊಸ್ಸಿ ಪಿಂಟೊ, ಮಮತಾ ಶೆಟ್ಟಿ, ಚಂದ್ರಿಕಾ ಶೆಟ್ಟಿ, ಸಂಧ್ಯಾ ತಿಲಕ್ ರಾಜ್, ಪ್ರಮೀಳಾ ಸುವರ್ಣ, ಸುಂದರಿ ಪುತ್ತೂರು, ಅರ್ಚನಾ ದೇವಾಡಿಗ, ಸುಪ್ರೀತಾ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article