
Udupi: ರಾಜ್ಯಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ
14/07/2025 07:10 AM
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಆಯೋಜಿಸಲಾಯಿತು. ವಿವಿಧ ಇಲಾಖೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರ ರಮೇಶ್ ಕಾಂಚನ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.