
Udupi: ದಲಿತರಿಗೆ ಭೂಮಿ, ವಸತಿ ಹಂಚಿಕೆಯಲ್ಲಿ ಅನ್ಯಾಯ;ತಹಶೀಲ್ದಾರ್ ಕಚೇರಿ ಎದುರು ಧರಣಿ
18/07/2025 06:33 PM
ಭೂಮಿ ಹಾಗೂ ವಸತಿ ಹಂಚಿಕೆಯಲ್ಲಿ ದಲಿತರಿಗೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಂಬೇಡ್ಕರ್ ವಾದ ಸಮಿತಿಯು ತಾಲೂಕು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ದಲಿತರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಆಗ್ರಹಿಸಿ ಉಡುಪಿ ಜಿಲ್ಲೆಯ ಏಳೂ ತಾಲೂಕು ಕಚೇರಿಗಳ ಎದುರು ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಉಡುಪಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲೆಯ ಡಿಸಿ ಮನ್ನಾ ಭೂಮಿ ಮರು ಹಂಚಿಕೆ, ಜಿಲ್ಲೆಯ ಅಕ್ರಮ ಸಕ್ರಮ ಸಮಿತಿಗಳು ದಲಿತರ ಅರ್ಜಿಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ದಲಿತ ಮುಖಂಡರು ಭಾಗವಹಿಸಿದ್ದರು.