
Udupi: ಕೆಪಿಸಿಸಿ ಪ್ರಚಾರ ಸಮಿತಿ ಪುನರ್ ರಚನೆ; ಉಡುಪಿ ಅಧ್ಯಕ್ಷರಾಗಿ ಹರೀಶ್ ಕಿಣಿ ಪುನರ್ ಆಯ್ಕೆ
30/07/2025
ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಅವರನ್ನು ಪುನರ್ ನೇಮಕ ಮಾಡಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಯು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿಯನ್ನು ಪುನರ್ ರಚಿಸಿದ್ದು, ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಹರೀಶ್ ಕಿಣಿ ಅವರನ್ನು ಪುನರ್ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.