Udupi:  ಕೃಷ್ಣಮಠದಲ್ಲಿ ಶಿರೂರು ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ

Udupi: ಕೃಷ್ಣಮಠದಲ್ಲಿ ಶಿರೂರು ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ

ಉಡುಪಿಯ ಶ್ರೀ ಶೀರೂರು ಮಠಾಧೀಶ ಶ್ರೀವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಪೂರ್ವಭಾವಿಯಾಗಿ "ಕಟ್ಟಿಗೆ ಮುಹೂರ್ತವು" ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿAದ ನಡೆಯಿತು. ಈ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರೊಂದಿಗೆ ಪ್ರಸ್ತುತ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಉಪಸ್ಥಿತರಿದ್ದರು.

ಶ್ರೀರೂರು ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯರು ನೇತೃತ್ವದಲ್ಲಿ ಪುರೋಹಿತರಾದ ಗಿರಿರಾಜ ಉಪಾಧ್ಯಾಯರು ಶ್ರೀರೂರು ಮಠದ ಶ್ರೀವಿಠ್ಠಲ,ಶ್ರೀಚಂದ್ರೇಶ್ವರ,ಶ್ರೀಅನAತೇಶ್ವರ ಹಾಗೂ ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆ ನೆರವೇರಿತು. ನಂತರ ಮಠದ ಕಲಸಂಕ ಲಕ್ಷ್ಮೀ ತೋಟದಿಂದ ಕಟ್ಟಿಗೆಯನ್ನು ಎತ್ತಿನಗಾಡಿ ಹಾಗೂ ಕೈಗಾಡಿಯಲ್ಲಿ ಮತ್ತು ಭಕ್ತರು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆಯಲ್ಲಿ ತರಲಾಯಿತು. ನಂತರ ಮಧ್ವಸರೋವರ ಈಶಾನ್ಯ ಭಾಗದ ನಿಗದಿತ ಸ್ಥಳದಲ್ಲಿ ಪೂಜಾದಿಗಳನ್ನು ಸಲ್ಲಿಸಿ ಪ್ರಾರ್ಥನೆಗೈದು ಕಟ್ಟಿಗೆ ರಥ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.


ಪರ್ಯಾಯ ಸ್ವಾಗತ ಸಮಿತಿ ಕಚೇರಿ ಉದ್ಘಾಟನೆಯನ್ನು ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,ಮಾಜಿ ಶಾಸಕ ರಘುಪತಿ ಭಟ್, ಉಡುಪಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ,ಮಟ್ಟಾರು ರತ್ನಾಕರ ಹೆಗ್ಡೆ, ಮಠದ ಪಾರುಪತ್ಯಗಾರ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.




Ads on article

Advertise in articles 1

advertising articles 2

Advertise under the article