
Udupi:ಇಬ್ಬರು ದನಗಳ್ಳರ ಬಂಧನ, ಜಾನುವಾರುಗಳ ರಕ್ಷಣೆ
13/07/2025 01:26 PM
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ದನ ಕಳ್ಳತನ ಪ್ರಕರಣಕ್ಕೆ ಸಂಬ0ಧಿಸಿ ಇಬ್ಬರು ಆರೋಪಿಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮೊಹಮ್ಮದ ಕೈಪ್ ಸಾಸ್ತಾನ ಮತ್ತು ಮೊಹಮ್ಮದ್ ಸುಹೇಲ್ ಖಾದರ್ ಉಚ್ಚಿಲ ಬಂಧಿತ ಆರೋಪಿಗಳು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜಾನುವಾರುಗಳನ್ನು ಕಳವು ಮಾಡಿ ಸಾಗಾಟ ಮಾಡಿದ ಕಾರುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಕಾರಿನಲ್ಲಿ ಸಾಗಾಟ ಮಾಡಿದ 4 ದನಗಳನ್ನು ರಕ್ಷಿಸಿ ಗೋಶಾಲೆಗೆ ಬಿಡಲಾಗಿದೆ ಎಂದು ತಿಳಿದು ಬಂದಿದೆ.
3 ತಂಡಗಳ ರಚನೆ-ಕ್ಷಿಪ್ರ ಕಾರ್ಯಾಚರಣೆ:
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ್ ಹಾಗೂ ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಹೆಚ್.ಡಿ ಕುಲಕರ್ಣಿಯವರ ನಿರ್ದೇಶನದಂತೆ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸವೀತ್ರತೇಜ್ ನೇತೃತ್ವದಲ್ಲಿ 3 ತಂಡಗಳನ್ನು ರಚಿಸಲಾಗಿತ್ತು. ತಂಡದ ನೇತೃತ್ವವನ್ನು ಬೈಂದೂರು ಪಿಎಸ್‌ಐ ತಿಮ್ಮೇಶ್ ಬಿ.ಎನ್., ಪಿಎಸ್‌ಐ ನವೀನ ಬೋರಕರ್, ಕೊಲ್ಲೂರು ಠಾಣೆ ಪಿಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ, ಗಂಗೊಳ್ಳಿ ಠಾಣೆ ಪಿಎಸ್‌ಐ ಬಸವರಾಜ್ ವಹಿಸಿದ್ದರು. ವಿವಿಧ ಠಾಣೆಯ ಪೊಲೀಸ್ ಸಿಬ್ಬಂದಿಗಳಾದ ನಾಗೇಂದ್ರ, ಮೋಹನ, ಸುರೇಶ್, ಚೇತನ್, ಜಯರಾಮ, ಸತೀಶ್, ಚಿದಾನಂದ, ಮಾಳಪ್ಪ ದೇಸಾಯಿ, ಶ್ರೀಧರ ಪಾಟೀಲ್, ಪರಯ್ಯ ಮಠಪತಿ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.