
Udupi: ಮುಂದುವರಿದ ಮಳೆ;ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ
16/07/2025 04:40 PM
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜುಲೈ ೧೭ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಘೂ ಪ್ರೌಢಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ. ಕಾಲೇಜುಗಳಿಗೆ ರಜೆ ನೀಡಿಲ್ಲ. ಆದರೆ ಸುರಕ್ಷತಾ ಕ್ರಮಗಳೊಂದಿಗೆ ಕಾಲೇಜಿಗೆ ತೆರಳುವಂತೆ ವಿದ್ಯಾರ್ಥಿಗಳೀಗೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾಲೇಜುಗಳಲ್ಲಿ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.