Uppinangady:  2021ರ ಅಪರಾಧ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Uppinangady: 2021ರ ಅಪರಾಧ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


2021 ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬ0ಧಿಸಿದ0ತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಮಂಜೇಶ್ವರದ ಯತಿರಾಜ್ (34) ಬಂಧಿತ ಆರೋಪಿ.

ಬಂಧಿತ ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿಗೆ 7 ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಇನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಾಗಿದೆ.


ಆರೋಪಿಯು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆರೋಪಿಯ ವಿರುದ್ಧ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. 



Ads on article

Advertise in articles 1

advertising articles 2

Advertise under the article