Uppingady: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ; ತಪ್ಪಿದ ಅನಾಹುತ
29/07/2025
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಶಿರಾಡಿ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ವೊ0ದು ಹೆದ್ದಾರಿ ಬದಿ ಮಗುಚಿ ಬಿದ್ದಿದೆ.
ಶಿರಾಡಿ ಗಡಿ ದೇವಸ್ಥಾನದ ಮೇಲ್ಬಾಗದ ಪರಿಸರದಲ್ಲಿ ಘಟನೆ ನಡೆದಿದೆ. ಅಪಘಾತದಿಂದ ಟ್ಯಾಂಕರ್ ಪಲ್ಟಿಯಾಗಿ ಪಕ್ಕದಲ್ಲೇ ಇದ್ದ ಗುಂಡ್ಯ ಹೊಳೆಗೆ ಬೀಳುವ ಸಾಧ್ಯತೆ ಇತ್ತು. ಆದರೆ ಪೊದೆ ಮರಗಳಿದ್ದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಕಲೇಶಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.