
ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಆ. 15ರಿಂದ ಪ್ಲಾಸ್ಟಿಕ್ ಬಳಕೆ ನಿಷಿದ್ಧ
13/08/2025
ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಪರಿಷತ್ನಲ್ಲಿ ತಿಳಿಸಿದ್ದಾರೆ. ದೇವಾಲಯಗಳ ಸುತ್ತ ಸ್ವಚ್ಛತೆ ಕಾಪಾಡಲು ಹಾಗೂ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲು ಸೂಚಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಇದು ಆಗಸ್ಟ್ 15ರಿಂದ ಪರಿಣಾಮಕಾರಿಯಾಗಿ ಜಾರಿಗೆ ಬರಲಿದೆ. ಈ ನಿಯಮ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.