
Andhra Pradesh: ತಿರುಮಲಕ್ಕೆ ತೆರಳುವ ವಾಹನಗಳಿಗೆ ಇನ್ನು ಫಾಸ್ಟ್ಯಾಗ್ ಕಡ್ಡಾಯ
16/08/2025
ತಿರುಮಲಕ್ಕೆ ಹೋಗುವ ಭಕ್ತರಿಗೆ ಹೊಸ ನಿಯಮ ಜಾರಿಗೆ ಬಂದಿದೆ. ಅಲಿಪಿರಿ ಚೆಕ್ ಪಾಯಿಂಟ್‌ನಲ್ಲಿ ಹೆಚ್ಚುತ್ತಿರುವ ಜನ ದಟ್ಟಣೆ ಮತ್ತು ಸಂಚಾರ ದಟ್ಟಣೆಯಿಂದಾಗಿ ತಿರುಮಲ ತಿರುಪತಿ ದೇವಸ್ಥಾನಗಳು ಈ ನಿರ್ಧಾರವನ್ನು ತೆಗೆದುಕೊಂಡಿದೆ.
ವೇಗದ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಜೊಸ ನಿಯಮ ಜಾರಿಗೊಳಿಸಲಾಗಿದೆ. ತಿರುಮಲಕ್ಕೆ ಹೋಗುವ ಪ್ರತಿಯೊಂದು ವಾಹನಕ್ಕೂ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ಆಗಸ್ಟ್ 15ರಂದು ಜಾರಿಗೆ ಬಂದಿದೆ. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳು ಇನ್ನು ಮುಂದೆ ತಿರುಮಲಕ್ಕೆ ಪ್ರವೇಶಿಸಲು ಅವಕಾಶವಿರುವುದಿಲ್ಲ. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳು ಬೆಟ್ಟದ ತಳದಲ್ಲೇ ನಿಲ್ಲಬೇಕಾಗುತ್ತದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು, ಸುರಕ್ಷತೆಯ್ನನು ಸುಧಾರಿಸಲು ಟಿಟಿಡಿ ಈ ನಿರ್ಧಾರವನ್ನು ತೆಗೆದುಕೊಮಡಿದೆ ಎಂದು ತಿಳಿದು ಬಂದಿದೆ.