
Bangalore: ಆ. 5ರ ರಾಹುಲ್ ಗಾಂಧಿ ಪ್ರತಿಭಟನೆ ಆ. 8ಕ್ಕೆ ಮುಂದೂಡಿಕೆ
04/08/2025
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮವನ್ನು ಖಂಡಿಸಿ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆಯನ್ನು ಮುಂದೂಡಲಾಗಿದೆ.
ಆಗಸ್ಟ್ 5ರ ಬದಲಿಗೆ ಆಗಸ್ಟ್ 8ರಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಜಾರ್ಖಾಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ದಾಖಲೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಪಾದಯಾತ್ರೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.