Bangalore: ಮನೆಯಲ್ಲಿ ಸ್ಫೋಟ; ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ- ಸಿಎಂ ಭರವಸೆ
15/08/2025
ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಬೆಂಗಳೂರಿನ ಚಿನ್ನಯ್ಯನಪಾಳ್ಯ ಪ್ರದೇಶಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದರು. ಈ ವೇಳೆ ಮೃತ ಬಾಲಕ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು.
ಘಟನೆಯಲ್ಲಿ ಛಿದ್ರಗೊಂಡ 3ಕ್ಕೂ ಅಧಿಕ ಮನೆಗಳನ್ನು ಪುನರ್ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದರು. ಚಿನ್ನಯ್ಯ ಪಾಳ್ಯದಲ್ಲಿ ಆಗಸ್ಟ್ 15ರಂದು ಅನುಮಾನಾಸ್ಪದ ಸ್ಫೋಟ ಸಂಭವಿಸಿ, ಬಾಲಕ ಸಾವನ್ನಪ್ಪಿದ್ದು, 8ಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.