Bangalore: ಪರಿಶಿಷ್ಟ ಜಾತಿ ಒಳ ಮೀಸಲಾತಿ ವಿಚಾರ; ಆ. 7ರ ಸಚಿವ ಸಂಪುಟ ಸಭೆಯಲ್ಲಿ ಮಂಡನೆ (Video)
04/08/2025
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯ ಅಧ್ಯಯನ ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದ್ದು, ಆಗಸ್ಟ್ 7ರಂದು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸಲಾಗುವುದು. ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.