
Bangalore: ರಾಜ್ಯದಲ್ಲಿ ಹೆಚ್ಚುತ್ತಿರುವ ಬೀದಿನಾಯಿ ಹಾವಳಿ; ಪರಿಷತ್‌ನಲ್ಲಿ ಚರ್ಚೆ
12/08/2025
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಚರ್ಚೆ ನಡೆಯಿತು.
ಪ್ರಶ್ತೋತರ ಕಲಾಪ ವೇಳೆ ವಿಪಕ್ಷ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ಚಿಕ್ಕಮಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಬೀದಿ ನಾಯಿಗಳ ದಾಳಿ ಸಮಸ್ಯೆ ಗಂಭೀರವಾಗಿದ್ದು, ಸರ್ಕಾರವು ಈ ಬಗ್ಗೆ ಕಾನೂನು ಸಲಹೆ ಪಡೆದು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವಂತೆ ಸಲಹೆ ನೀಡಿದರು. ಈ ಬಗ್ಗೆ ಉತ್ತರಿಸಿದ ಪೌರಾಡಳಿತ ಸಚಿವ ರಹೀಂಖಾನ್, ಬೀದಿ ನಾಯಿ ಹಾವಳಿ ವಿಚಾರ ಸಂಬ0ಧಿಸಿದ0ತೆ ಶೀಘ್ರದಲ್ಲಿ ಸಭೆ ಕರೆಯುತ್ತೇನೆ. ಸಮಸ್ಯೆ ನಿವಾರಣೆಗೆ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುತ್ತೇನೆ ಎಂದರು.