
Bangalore: ನಾಳೆಯಿಂದ ಮಳೆ ಮತ್ತೆ ಬಿರುಸು; ಹವಾಮಾನ ಇಲಾಖೆ ಮುನ್ಸೂಚನೆ
12/08/2025
ಕರ್ನಾಟಕ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 13ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ನಾಳೆಯಿಂದ ಮಳೆ ಕೊಂಚ ಬಿರುಸು ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.