
Bangalore: ಗಣೇಶೋತ್ಸವ, ಈದ್ ಮಿಲಾದ್‌ಗೆ ಡಿಜೆ ನಿಷೇಧ; ರಾಜ್ಯಸರ್ಕಾರದ ಆದೇಶ
13/08/2025
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಮುಗಿಯುವವರೆಗೂ ಮುಂಜಾಗ್ರತಾ ಕ್ರಮವಾಗಿ ಶಾಂತಿ ಸವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 15ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ಆಗಸ್ಟ್ 27ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ವಿಸರ್ಜನೆಯ ವೇಳೆ ಡಿಜೆ ಧ್ವನಿವರ್ಧಕಗಳನ್ನು ಬಳಸಲಾಗುತ್ತಿತ್ತು. ಹಾಗಾಗಿ ಆಗಸ್ಟ್ 27ರಿಂದ ಸೆಪ್ಟೆಂಬರ್ 15ರವರೆಗೆ 20 ದಿನಗಳ ಕಾಲ ಧ್ವನಿ ವರ್ಧಕ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.