
Bangalore: ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಸೇರಿ ಆರೋಪಿಗಳ ಜಾಮೀನು ರದ್ದು
14/08/2025
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ರೇಣುಕಾಸ್ವಾಮಿ ಹಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿದ್ದ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಹಾಗೂ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಇದೀಗ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ನೀಡಿದೆ.